ಮಂಗಳೂರಿನಲ್ಲಿ ನೇತ್ರಾವತಿ ನದಿ ತೀರದಲ್ಲಿ ಸಾವಿರಾರು ಆಧಾರ್ ಕಾರ್ಡ್ ಪತ್ತೆ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಮಂಗಳವಾರ ಸಂಜೆ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್‌ಗಳನ್ನು ಸ್ಥಳೀಯರು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಬಳಿಕ ಹಲವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ನದಿ ತೀರದ ಬಳಿ ರಾಶಿ ರಾಶಿಯಾಗಿ ಆಧಾರ್ ಕಾರ್ಡ್‌ಗಳು ಚದುರಿಕೊಂಡಿರುವುದು ಕಂಡುಬಂದಿದೆ.

ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್‌ಗಳು ಅಲ್ಲಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್‌ಗಳು ತಲುಪದೆ ಜನರು ಸೈಬರ್ ಕೇಂದ್ರಗಳಿಗೆ ಹಣ ನೀಡಿ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಹೇಳಿದರು. ಇದೀಗ ಸಾವಿರಾರು ಆಧಾರ್ ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಚಾರವಾಗಿದ್ದು, ಇದರ ಹಿಂದೆ ಯಾರು ಎಂಬುದನ್ನು ಪತ್ತೆಹಚ್ಚಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭಾ ಸ್ಪೀಕರ್ U. T. Khader ಅವರು ಕೂಡಲೇ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿರುವ ಹಿನ್ನೆಲೆ ದತ್ತಾಂಶ ದುರುಪಯೋಗದ ಸಾಧ್ಯತೆಯನ್ನು ಗಮನದಲ್ಲಿಟ್ಟು Unique Identification Authority of India (UIDAI) ಅಧಿಕಾರಿಗಳಿಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಆಧಾರ್ ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಲು ಕಾರಣವೇನು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ತನಿಖೆ ಮೂಲಕ ಪತ್ತೆಹಚ್ಚಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ